ಭಾನುವಾರ, ಜುಲೈ 5, 2026
admin_panel_settings settings
share

Kaveri News Logo E-News

Kannada & English Editorial Portal

Kaveri News Logo

ಆಂಧ್ರದಲ್ಲಿ ಮತ್ತೆ ಕೋವಿಡ್ ಆತಂಕ; ಇಬ್ಬರು ಬಲಿ, 8 ಸಕ್ರಿಯ ಪ್ರಕರಣ

Kaverinews | Published on: | Views: 37
ರಾಷ್ಟ್ರೀಯ
ಆಂಧ್ರದಲ್ಲಿ ಮತ್ತೆ ಕೋವಿಡ್ ಆತಂಕ; ಇಬ್ಬರು ಬಲಿ, 8 ಸಕ್ರಿಯ ಪ್ರಕರಣ
ಅಮರಾವತಿ: ಆಂಧ್ರಪ್ರದೇಶದಲ್ಲಿ(Andhra Pradesh) ಮತ್ತೆ ಕೋವಿಡ್-19 (COVID- 19) ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

ರಾಜಂಪೇಟೆ ಮೂಲದ 52 ವರ್ಷದ ವ್ಯಕ್ತಿಗೆ ಜ್ವರ ಮತ್ತು ಕೆಮ್ಮು ಕಾಣಿಸಿಕೊಂಡಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ಕೋವಿಡ್ ದೃಢಪಟ್ಟ ಬಳಿಕ ವೆಲ್ಲೂರಿನ ಸಿಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ಇನ್ನೊಂದು ಪ್ರಕರಣದಲ್ಲಿ, 43 ವರ್ಷದ ವ್ಯಕ್ತಿಯೊಬ್ಬರು ಆರೋಗ್ಯ ಸಮಸ್ಯೆಯಿಂದ ಕಡಪ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬಳಿಕ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ. ಕಡಪ ವೈದ್ಯಕೀಯ ಕಾಲೇಜಿನ 25 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಗೂ ಕೋವಿಡ್ ಸೋಂಕು ದೃಢಪಟ್ಟಿದೆ. ಅವರು ಸದ್ಯ ಮನೆಯಲ್ಲೇ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

Share this article